ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ಅಧಿಕಾರ ಸ್ವೀಕಾರ

Update: 2022-05-15 11:55 GMT
Photo: Twitter/ECISVEEP

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುಶೀಲ್ ಚಂದ್ರ ಅವರು ನಿವೃತ್ತರಾದ ಒಂದು ದಿನದ ನಂತರ ರಾಜೀವ್ ಕುಮಾರ್ ಅವರು ರವಿವಾರ ಭಾರತದ 25 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಕುಮಾರ್ ಅವರ ನೇಮಕವನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಪ್ರಕಟಿಸಿದ್ದರು.

ಕುಮಾರ್ ಅವರು ಸೆಪ್ಟೆಂಬರ್ 1, 2020 ರಿಂದ ಚುನಾವಣಾ ಆಯುಕ್ತರಾಗಿದ್ದಾರೆ. ಅವರು 1984 ಬ್ಯಾಚ್‌ನ ಭಾರತೀಯ ಆಡಳಿತ ಸೇವಾ ಅಧಿಕಾರಿ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡಿದ್ದಾರೆ. ಅವರು 2015ರಿಂದ 2017 ರವರೆಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಸ್ಥಾಪನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2020 ರಲ್ಲಿ, ಅವರು ತಮ್ಮ ಹಣಕಾಸು ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ರಾಜೀವ್ ಕುಮಾರ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ಕರ್ನಾಟಕ, ತೆಲಂಗಾಣ, ತ್ರಿಪುರ, ಮೇಘಾಲಯ, ಮಿಜೋರಾಂ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗಳನ್ನು ಮತ್ತು 2024 ರ ಲೋಕಸಭೆ ಚುನಾವಣೆಗಳನ್ನು ನೋಡಿಕೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News