ರಾಜ್ಯದಲ್ಲಿ ರವಿವಾರ 126 ಮಂದಿಗೆ ಕೊರೋನ ದೃಢ: ಸಾವಿನ ಸಂಖ್ಯೆ ಶೂನ್ಯ

Update: 2022-05-15 16:42 GMT

ಬೆಂಗಳೂರು, ಮೇ 15: ರಾಜ್ಯದಲ್ಲಿ ರವಿವಾರ 126 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 103 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,49,675ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,063ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,891ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 126 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 2, ಬೆಂಗಳೂರು ನಗರ 118, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ಹಾಸನ 2, ಮೈಸೂರು 1, ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 
   
ರಾಜಧಾನಿಯಲ್ಲಿ 118 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 118 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,66,681  ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,85,454  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News