​ಶಿವಮೊಗ್ಗ: ಕಾರು ಢಿಕ್ಕಿ; ಏಳು ಎಮ್ಮೆಗಳು ಸ್ಥಳದಲ್ಲೇ ಸಾವು

Update: 2022-05-16 05:50 GMT

ಶಿವಮೊಗ್ಗ: ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಮುಂಭಾಗ ನುಜ್ಜುಗುಜ್ಜಾದ ಘಟನೆ ಗಾಡಿಕೊಪ್ಪದ ತುಂಗಾ ನಾಲೆ ಬಳಿ ರವಿವಾರ ರಾತ್ರಿ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಢಿಕ್ಕಿ ಹೊಡೆದಿದೆ.

ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News