ಮಕ್ಕಳ ಕೈಗೆ ಚಾಕು ಚೂರಿ ನೀಡಿ ಪ್ರಚೋದಿಸುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ: ಗೃಹ ಸಚಿವರಿಗೆ ಕಾಂಗ್ರೆಸ್ ಪ್ರಶ್ನೆ

Update: 2022-05-16 10:26 GMT
ವೈರಕ್ ಫೋಟೊ

ಬೆಂಗಳೂರು:  ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲಾ ಆವರಣವೊಂದರಲ್ಲಿ ತ್ರಿಶೂಲ ದೀಕ್ಷೆ ಹಾಗೂ ನಿರ್ಜನ ಪ್ರದೇಶವೊಂದರಲ್ಲಿ ಬಂದೂಕು ತರಬೇತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, 'ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ?' ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಈ ಸಂಬಂಧ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಗನ್ ತರಬೇತಿ ನೀಡಿದ್ದು ಯಾರು? ಯಾವ ಸಂಘಟನೆ? ಅದಕ್ಕೆ ಅನುಮತಿ ಕೊಟ್ಟವರು ಯಾರು? ಮಕ್ಕಳ ಕೈಗೆ ಚಾಕು ಚೂರಿ ನೀಡಿ ಪ್ರಚೋದಿಸುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದೀರಾ? ಕೂಡಲೇ ಇಂತಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಒತ್ತಾಯಿಸಿದೆ. 

ಕೊಡಗಿನ ವಿದ್ಯಾ ಸಂಸ್ಥೆಯ ಆವರಣದಲ್ಲಿ ಒಂದು ವಾರಗಳ ಕಾಲ ನಡೆದ ಶೌರ್ಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ವಿತರಿಸುತ್ತಿರುವ ಫೋಟೋಗಳು ಎಲ್ಲೆಡೆ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News