ಬೆಂಗಳೂರು | ಪತ್ನಿಗೆ ಕಿರುಕುಳ ಆರೋಪ: ಹೆಡ್‍ಕಾನ್‍ಸ್ಟೇಬಲ್ ವಿರುದ್ಧ ದೂರು

Update: 2022-05-16 12:00 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 16: ಪೊಲೀಸ್ ಹೆಡ್‍ಕಾನ್‍ಸ್ಟೇಬಲ್‍ವೊಬ್ಬ ಪ್ರತಿನಿತ್ಯ ತನ್ನ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸಿಟಿ ಸ್ಪೆಷಲ್ ಬ್ರಾಂಚ್‍ನಲ್ಲಿ ಹೆಡ್ ಕಾನ್‍ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಎಂ.ಬಾಬು ವಿರುದ್ಧ ಅವರ ಪತ್ನಿ ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತರ ಕಚೇರಿ ಹಾಗೂ ಗಿರಿನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಈ ಹಿಂದೆ ವರ್ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಬು, ಪ್ರಕರಣವೊಂದರ ಸಲುವಾಗಿ ನಾನು ದೂರು ನೀಡಲು ಹೋಗಿದ್ದಾಗ ಪರಿಚಯವಾಗಿದ್ದರು. ನಂತರ ತನ್ನನ್ನು ನಂಬಿಸಿ ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು ಬಳಿಕ ವಿವಾಹವಾಗಿದ್ದಾರೆ.

ನಂತರ, ಗಿರಿನಗರ ಠಾಣೆ ವ್ಯಾಪ್ತಿಯ ಡಿಸೋಜ ನಗರದಲ್ಲಿ ನಾವು ವಾಸವಿದ್ದೇವೆ. ಆದರೆ ಪ್ರತಿನಿತ್ಯ ನಮ್ಮಿಬ್ಬರು ಮಕ್ಕಳ ಮುಂದೆಯೇ ಅವಾಚ್ಯವಾಗಿ ನಿಂದಿಸುತ್ತಾರೆ. ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News