ಸರಕಾರ ಜೀವಂತವಾಗಿದೆಯೇ?: ಸಿದ್ದರಾಮಯ್ಯ ಪ್ರಶ್ನೆ

Update: 2022-05-16 14:33 GMT

ಬೆಂಗಳೂರು, ಮೇ 16: ‘ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ಬಜರಂಗದಳದಿಂದ ನಡೆಸಿದ ಬಂದೂಕು ತರಬೇತಿಯಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕ್ರಮ ಕೈಗೊಳ್ಳಬೇಕು' ಎಂದು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶಸ್ತ್ರಾಸ್ತ್ರ ತರಬೇತಿ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣವೇ ಭಜರಂಗದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು' ಎಂದು ಇದೇ ಸಂದರ್ಭದಲ್ಲಿ ಒತ್ತಾಯ ಮಾಡಿದ್ದಾರೆ.

‘ಭಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಎಂ.ಎ.ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ? ಮಡಿಕೇರಿಯ ಶಾಲೆಯಲ್ಲಿ ಬಜರಂಗದಳ ಯುವಜನರಿಗೆ ಶಸ್ತ್ರ ತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರಕಾರ ಜೀವಂತವಾಗಿದೆಯೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News