ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿ

Update: 2022-05-16 15:33 GMT

ಬೆಂಗಳೂರು, ಮೇ 16: ಶಾಲಾ ಮಕ್ಕಳಿಗೆ ಶೀಘ್ರದಲ್ಲಿಯೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಶುಭ ಕೋರಿದ ಅವರು, ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಒಳ್ಳೆಯ ವಾತಾವರಣ ನಿರ್ಮಾಣವಾಗಲಿ ಎನ್ನುವ ಆಶಯ ನಮ್ಮದು. ಶಾಲೆಯಲ್ಲಿಯೇ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಇಂದಿನಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸಿದ್ದು ವರದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News