ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು

Update: 2022-05-16 17:57 GMT

ಬೆಂಗಳೂರು, ಮೇ 16: ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆಲ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ನಮಗೆ ನ್ಯಾಯ ಸಿಗದಿದ್ದರೆ ಉಗ್ರಗಾಮಿ ಸಂಘಟನೆಗೆ ಸೇರುತ್ತೇವೆ ಎಂದು ಉಲ್ಲೇಖಿಸಿದ್ದಾರೆ.

ಪಿಎಸ್ಸೈ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಅಲ್ಲದೇ 2021ರಲ್ಲಿ ನಡೆದ ಎಫ್‍ಡಿಎ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅಕ್ರಮದ ಬಗ್ಗೆ ತನಿಖೆ ಮಾಡಿಸಿ ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆಯಿದೆ. ರಾಜ್ಯದಲ್ಲಿ ಸರಕಾರಿ ಹುದ್ದೆಗಳು ಹಣವಿದ್ದವರಿಗೆ ಎಂಬ ವ್ಯವಸ್ಯೆ ಬಂದುಬಿಟ್ಟಿದೆ. ಸರಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತು ಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವುದಿಲ್ಲ. ಒಂದು ವೇಳೆ ನಮಗೆ ನ್ಯಾಯ ಸಿಗದಿದ್ದರೆ ಉಗ್ರಗಾಮಿ ಸಂಘಟನೆಗೆ ಸೇರುತ್ತೇವೆ ಎಂದು ಹೇಳಿದ್ದಾರೆ.

ನಾವು 8 ಮಂದಿಯಿದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದಾಗಿ ಪ್ರಧಾನಿಗೆ ಎರಡು ಪುಟಗಳ ಪತ್ರ ಬರೆದ್ದಾರೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ... ಜೀವ ಬಿಟ್ಟರೂ ಜಗ್ಗದ ಬಿಜೆಪಿ, ರಕ್ತಪತ್ರಕ್ಕೆಲ್ಲ ಬಗ್ಗುವುದೇ?: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News