'ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು': ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಶಾಸಕ ಬೋಪಯ್ಯ

Update: 2022-05-17 07:37 GMT

ಮಡಿಕೇರಿ: 'ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ವಾಗ್ದಾಳಿ ನಡೆಸಿದ್ದಾರೆ. 

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಸಂಘಪರಿವಾರದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಿಬಿರದಲ್ಲಿ ಭಾಗವಹಿಸುವವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂಬ ಹೇಳಿಕೆ ನೀಡಿದ್ದರು.

ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಜಿ.ಬೋಪಯ್ಯ , ಬಜರಂಗದಳ ಶಿಬಿರದಲ್ಲಿ ಶಾಸಕರು ಭಾಗವಹಿಸಬಾರದು ಅಂತ ಕಾನೂನಿದ್ಯಾ ಎಂದು ಪ್ರಶ್ನಿಸಿದರು. 

'ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಭೇಟಿ ಕೊಡೋದು ನನ್ನ ಕರ್ತವ್ಯ. ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಕೇಳೋಕೆ ಇವನ್ಯಾರು ಸಿದ್ದರಾಮಯ್ಯ? ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತೀ ವರ್ಷ ಅಭ್ಯಾಸ ವರ್ಗ ರಾಜ್ಯದ ವಿವಿಧೆಡೆಗಳಲ್ಲಿ ಮಾಡ್ತಾರೆ. ಈ ವರ್ಷ ಕೊಡಗಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ. ನಾನೇನು ನನ್ನ ಮನೆಯಿಂದ ಗನ್ ತೆಗೆದುಕೊಂಡು ಹೋಗಿ ತರಬೇತಿ ಕೊಟ್ಟಿಲ್ಲ' ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News