ಸ್ಮೃತಿ ಇರಾನಿ ಕಾರ್ಯಕ್ರಮದಲ್ಲಿ ಎನ್ಸಿಪಿ ಸದಸ್ಯೆಯ ಮೇಲೆ ಹಲ್ಲೆಗೈದ ಮೂವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲು

Update: 2022-05-17 09:52 GMT
Twitter/Screengrab

ಪುಣೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾಗವಹಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದ ವೇಳೆ ಸಭಾಂಗಣದಲ್ಲಿ ಎನ್‌ಸಿಪಿ ಮಹಿಳಾ ಸದಸ್ಯೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಪುಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ Theprint.in ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್ ಮತ್ತು ಎನ್‌ಸಿಪಿ ಕಾರ್ಯಕರ್ತರು ಬೆಲೆ ಏರಿಕೆ ವಿರುದ್ಧ ಐಷಾರಾಮಿ ಹೋಟೆಲ್ ಮತ್ತು ಬಾಲಗಂಧರ್ವ ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದಾಗ ಸೋಮವಾರ ಈ ಘಟನೆ ನಡೆದಿದೆ. ಇರಾನಿ ಅವರು ಪುಣೆ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

“ಸೋಮವಾರ ತಡರಾತ್ರಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 354, 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ) ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ನಾವು ಮೂವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುರಳೀಧರ ಕರ್ಪೆ ತಿಳಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಎಲ್‌ಪಿಜಿ ಬೆಲೆ ಏರಿಕೆ ವಿಷಯದ ಕುರಿತು ಇರಾನಿಗೆ ಮನವಿ ಪತ್ರ ನೀಡಲು ಮಹಿಳಾ ಎನ್‌ಸಿಪಿ ಕಾರ್ಯಕಾರಿಣಿ ಮತ್ತು ಇತರ ಮೂವರು ಪಕ್ಷದ ಸದಸ್ಯರು ಸಭಾಂಗಣಕ್ಕೆ ತೆರಳಿದ್ದರು. ಎನ್‌ಸಿಪಿ ಸದಸ್ಯೆ ನಂತರ ತನ್ನ ಪೊಲೀಸ್ ದೂರಿನಲ್ಲಿ ಬಿಜೆಪಿ ಕಾರ್ಯಕರ್ತರು ತನ್ನ ಮತ್ತು ಪಕ್ಷದ ಇತರ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News