ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

Update: 2022-05-17 09:58 GMT

ಬೆಂಗಳೂರು: ವಿಧಾನಸಪರಿಷತ್  ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ. 

ರಘುನಾಥ್ ರಾವ್ ಮಲಕಾಪೂರೆ ಅವರನ್ನು  ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೇಮಕಗೊಳಿಸಿದ್ದು,  ಇಂದು 3 ಗಂಟೆಗೆ ಕೊಠಡಿ ಸಂಖ್ಯೆ  117 ರಲ್ಲಿ  ಅಧಿಕಾರ ಸ್ವೀಕರಿಸಲಿದ್ದಾರೆ.

ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನ ತೆರವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News