ಗುಂಡ್ಲುಪೇಟೆ; ಕಾರು ಢಿಕ್ಕಿ: ಬೈಕ್‌ ಸವಾರ ಮೃತ್ಯು

Update: 2022-05-17 10:11 GMT

ಚಾಮರಾಜನಗರ; ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಬಳಿ ನಡೆದಿದೆ.

ಮೃತ ಬೈಕ್‌ ಸವಾರನನ್ನು ಬೆಂಡರವಾಡಿ ನಿವಾಸಿ ಎಂದು ತಿಳಿದುಬಂದಿದೆ. 

ಕಾರು ಮತ್ತು ಬೈಕ್‌ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News