ಮೇ 19ರಂದು ಬಿ.ಕೆ.ಹರಿಪ್ರಸಾದ್, ಯು.ಟಿ. ಖಾದರ್‌ಗೆ ಅಭಿನಂದನಾ ಕಾರ್ಯಕ್ರಮ

Update: 2022-05-17 13:52 GMT

ಮಂಗಳೂರು : ದಕ್ಷಿಣ ಕನ್ನಡ ಮೂಲದ, ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅವರಿಗೆ ಅಭಿನಂದನಾ ಸಮಿತಿ ಆಶ್ರಯದಲ್ಲಿ ಮೇ 19 ರಂದು ಸಂಜೆ ಮೂರು ಗಂಟೆಗೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಉದ್ಘಾಟಿಸುವರು. ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಅಭಿನಂದನಾ ಭಾಷಣ ನಡೆಸುವರು ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಧರ ಹೆಗ್ಡೆ ಮಂಗಳವಾರ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕೆ.ಅಭಯ ಚಂದ್ರ ಜೈನ್, ಗಂಗಾಧರ ಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಪಕ್ಷದ ಮಾಜಿ ಸಚಿವರು. ಶಾಸಕರು ಭಾಗವಹಿಸುವರು  ಎಂದು ಅವರು ಮಾಹಿತಿ ನೀಡಿದರು.

ಅಭಿನಂದನಾ ಸಮಿತಿಯ ಸಹ ಸಂಚಾಲಕ ಪುರುಷೋತ್ತಮ ಚಿತ್ರಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆ.ಶಾಹುಲ್ ಹಮೀದ್, ಪಾಲಿಕೆ ಸದಸ್ಯ ನವೀನ್ ಆರ್.ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಮುಖಂಡರಾದ ಸುಧೀರ್ ಟಿ.ಕೆ., ಶಬೀರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News