ಮಕ್ಕಳ ಸಹಾಯವಾಣಿ 1098 ಮಾಸಾಚರಣೆ ಉದ್ಘಾಟನೆ

Update: 2022-05-17 14:20 GMT

ಉಡುಪಿ : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ೧೦೯೮ ಇವರ ಸಹಯೋಗದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ದಿನಾಚರಣೆ ಹಾಗೂ ಮೇ ೨೦೨೨ ಮಕ್ಕಳ ಸಹಾಯ ವಾಣಿ ೧೦೯೮ ಮಾಸಾಚರಣೆ ಕಾರ್ಯಕ್ರಮವನ್ನು ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ನಳಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಉದ್ಘಾಟಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಇದೇ ಸಂದರ್ಭದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ನಿರ್ಲಕ್ಷಕ್ಕೆ ಒಳಗಾದ  ಪರಿತ್ಯಜಿಸಲ್ಪಟ್ಟ ದೌರ್ಜನ್ಯ, ಶೋಷಣೆಗೊಳಗಾದ ಹಾಗೂ ಕುಟುಂಬ ದಿಂದ ಬೇರ್ಪಟ್ಟ ಮಕ್ಕಳಿಗೆ ಹಾಗೂ ಪೋಷಕರಿಗಾಗಿ, ಆಪ್ತ ಸಮಾಲೋಚನೆಯ ಅಗತ್ಯವಿರುವ ೦-೧೮ ವರ್ಷದ ಎಲ್ಲಾ ಮಕ್ಕಳಿಗೆ ಉಚಿತ ಆಪ್ತಸಮಾಲೋಚನೆ ಗಾಗಿ ಟೋಲ್ ಫ್ರೀ ಸಂಖ್ಯೆ ಹಾಗೂ ಮಕ್ಕಳ ಸಹಾಯವಾಣಿ ೧೦೯೮ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿ ಬಿಡುಗಡೆ ಗೊಳಿಸಿದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಹಾಗೂ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ವಾಸಪ್ಪನಾಯಕ್, ಮುಖ್ಯೋಪಾಧ್ಯಾಯನಿ ಸಂಧ್ಯಾರಾಣಿ, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯಕ್ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಸುರಕ್ಷಾ ವಂದಿಸಿದರು. ಮಕ್ಕಳ ಸಹಾಯ ವಾಣಿಯ ಸಿಬ್ಬಂದಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News