ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ: ಸುಪ್ರೀಂಗೆ ಮೇ 25ಕ್ಕೆ ಅರ್ಜಿ ಸಲ್ಲಿಕೆ

Update: 2022-05-17 15:15 GMT
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿ

ಬೆಂಗಳೂರು, ಮೇ 17: ಮೀಸಲಾತಿ ಪ್ರಕರಣ ನ್ಯಾಯಾಲಯದಲ್ಲಿ ಇರುವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಕಿರಣ್ ಸಾಮ್ರಾಣಿ ಹಾಗೂ ಅಲ್ತಾಫ್ ಕಿತ್ತೂರ ಅವರು ತುರ್ತು ವಿಚಾರಣೆಗಾಗಿ ಸುಪ್ರೀಂಕೋರ್ಟ್‍ಗೆ ಮೇ 25ರಂದು ಮೇಲ್ಮನವಿ ಸಲ್ಲಿಸಲಿದ್ದಾರೆ. 

ಈಗಾಗಲೇ ಮೀಸಲಾತಿ ಹಾಗೂ ವಾರ್ಡ್ ವಿಂಗಡಣೆ ಸೇರಿದಂತೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಚುನಾವಣೆಯೇ ಅಸಂವಿಧಾನಿಕವಾಗಿ ನಡೆದಿದ್ದು, ಕೋರ್ಟ್‍ನಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ ಮಾಡಿರುವುದು ಸರಿಯಲ್ಲ. ಕೋರ್ಟ್‍ನಲ್ಲಿ ವಿಚಾರಣೆಯಲ್ಲಿರುವಾಗಲೇ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪಾಲಿಕೆ ವಾರ್ಡ್‍ಗಳ ಮೀಸಲಾತಿ ಸಮರ್ಪಕವಾಗಿ ನಡೆದಿಲ್ಲ. ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಇದೇ ಕಾರಣಕ್ಕೆ ಗೋವಾದಲ್ಲಿ ಚುನಾವಣಾ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇಡೀ ಚುನಾವಣಾ ಪ್ರಕ್ರಿಯೆ ರದ್ದುಗೊಳಿಸುವಂತೆ ಮನವಿ ಮಾಡಿದ್ದೇವೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ಮೇಯರ್-ಉಪಮೇಯರ್ ಚುನಾವಣೆ ಘೋಷಣೆಯಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News