​ಗ್ರಾಪಂ ಉಪ ಚುನಾವಣೆ: ವೇತನ ಸಹಿತ ರಜೆ

Update: 2022-05-17 15:28 GMT

ಉಡುಪಿ : ಗ್ರಾಮ ಪಂಚಾಯತ್‌ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಮೇ ೨೦ರಂದು ಮತದಾನ ನಡೆಯಲಿರುವ ಹಿನ್ನೆಲೆ ಯಲ್ಲಿ ಗ್ರಾಪಂ ವ್ಯಾಪ್ತಿಯ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಸ್ಥೆಗಳಲ್ಲಿ, ವ್ಯವಹಾರಿಕಾ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಹಾಗೂ ಇತರೆ ಎಸ್ಟಾಬ್ಲಿಶ್‌ ಮೆಂಟ್‌ಗಳಲ್ಲಿ ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ, ಮತದಾನ ಮಾಡಲು ಅನುಕೂಲವಾಗುವಂತೆ, ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಚುನಾವಣಾ ದಿನದಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News