ಬೆಂಗಳೂರು: ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ; ಸಂತ್ರಸ್ತರ ಮನೆಗಳಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ

Update: 2022-05-18 03:26 GMT

ಬೆಂಗಳೂರು: ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹಾಲಕ್ಷ್ಮಿ ಲೇ‌ಔಟ್ ವಿಧಾನಸಭಾ ಕ್ಷೇತ್ರದ ಹಲವೆಡೆ ತಗ್ಗು ಪ್ರದೇಶದ 200 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.

ಕಮಲಾ‌ನಗರ, ನಂದಿನಿ ಬಡಾವಣೆ, ಕಂಠೀರವ ನಗರ ಸೇರಿದಂತೆ ಲೇ ಔಟ್ ನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಸುದ್ದಿ ತಿಳಿದ ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಮಧ್ಯರಾತ್ರಿ  ಮನೆ‌ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಬೆಳಗ್ಗೆ ಮತ್ತೆ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ ಸಚಿವರು 250 ಕ್ಕೂ ಹೆಚ್ಚು ಕುಟುಂಬಗಳಿಗೆ ‌ಬೆಳಗಿನ ತಿಂಡಿ ಮತ್ತು ಮಧ್ಯಾಹ್ನದ ‌ಊಟದ ವ್ಯವಸ್ಥೆ ಕಲ್ಪಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಕೈ ಗೊಂಡಿರುವ ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು‌ ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News