ಮೇ 19ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟ

Update: 2022-05-18 12:07 GMT

ಬೆಂಗಳೂರು, ಮೇ 18: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವು ಇಂದು(ಮೇ 19) ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಕೆಯು ತಿಳಿಸಿದೆ. 

ಈ ವರ್ಷ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಗಂಡು ಮಕ್ಕಳು 4,52,732 ಹಾಗೂ 4,21,110 ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 5,307 ವಿಭಿನ್ನ ಸಾಮಥ್ರ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯಾದ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 

ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಹಾಗೆಯೇ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‍ಗಳಿಗೆ ಎಸ್‍ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‍ಸೈಟ್ https://karresults.nic.in ಹಾಗೂ kseeb.Karnataka.gov.in ನಲ್ಲಿಯೂ ವೀಕ್ಷಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News