ಮತಾಂತರ ನಿಷೇಧದ ಸುಗ್ರೀವಾಜ್ಞೆ ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ

Update: 2022-05-18 10:12 GMT

ಬೆಂಗಳೂರು, ಮೇ 18: ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್‌ ನಿಂದ  ಹಿಡಿದು ಅಝಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?" ಎಂದು ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

"ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್‌ ಸಿಗದೆ ಕೋವಿಡ್‌ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?" ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ?" ಎಂದೂ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಇದು ಸರಕಾರದ ಅಸಾಂವಿಧಾನಿಕ ನಡೆ ಎಂದು ಖಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News