ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜಿನಾಮೆ

Update: 2022-05-18 12:48 GMT

ಹೊಸದಲ್ಲಿ :‌ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು "ವೈಯಕ್ತಿಕ ಕಾರಣಗಳನ್ನು" ಉಲ್ಲೇಖಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ndtv.com ವರದಿ ಮಾಡಿದೆ.

ಈ ಹಿಂದಿನ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ ಡಿಸೆಂಬರ್ 2016 ರಲ್ಲಿ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಲೆಫ್ಟಿನೆಂಟ್ ಗವರ್ನರ್ ಪಾತ್ರವು ದಿಲ್ಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವಿನ ಸಂಪೂರ್ಣ ಅಧಿಕಾರದ ಜಗಳದಲ್ಲಿ ಮಹತ್ವದ ಸ್ಥಾನ ಪಡೆದಿದೆ.  ಈ ವಿಚಾರವಾಗಿ, 2018 ರಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡುವವರೆಗೆ ಈ ಜಗಳವು ಚಾಲ್ತಿಯಲ್ಲಿತ್ತು.

ಲೆಫ್ಟಿನೆಂಟ್ ಗವರ್ನರ್‌ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವಿಲ್ಲ ಮತ್ತು ನಿಜವಾದ ಅಧಿಕಾರವು ಚುನಾಯಿತ ಸರ್ಕಾರಕ್ಕೆ ಇರಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪು ದಿಲ್ಲಿಯ ನಿಯಂತ್ರಣಕ್ಕಾಗಿ ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಕೇಜ್ರಿವಾಲ್‌ಗೆ ದೊಡ್ಡ ‌ಗೆಲುವನ್ನು ನೀಡಿತ್ತು.

ನೆಲ, ಪೊಲೀಸ್ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದನ್ನು ಹೊರತುಪಡಿಸಿ, ಸಂವಿಧಾನದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಯಾವುದೇ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News