ರಾಜ್ಯದಲ್ಲಿ ಬುಧವಾರ 122 ಕೊರೋನ ಪ್ರಕರಣ ದೃಢ

Update: 2022-05-18 17:03 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಮೇ 18: ರಾಜ್ಯದಲ್ಲಿ ಬುಧವಾರ 122 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಮೃತಪಟ್ಟಿದ್ದು, 162 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,50,004ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,064ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,761ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 122 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 95, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 6, ಹಾಸನ 1, ಉಡುಪಿ 1, ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News