ಖ್ಯಾತ ಸಾಹಿತಿ, ವಿಮರ್ಶಕ ಡಿ.ಎಸ್.‌ ನಾಗಭೂಷಣ ನಿಧನ

Update: 2022-05-19 03:52 GMT

ಶಿವಮೊಗ್ಗ : ಖ್ಯಾತ ಸಾಹಿತಿ, ವಿಮರ್ಶಕ ಡಿ.ಎಸ್.‌ ನಾಗಭೂಷಣ ಅವರು ಮಧ್ಯರಾತ್ರಿ ಸುಮಾರು 12.15ಕ್ಕೆ ಶಿವಮೊಗ್ಗದಲ್ಲಿ ನಿಧನರಾದರು.

ಅವರಿಗೆ 70 ವರ್ಷ ವಯಸ್ಸಾಗಿತ್ತು.

ಡಿ.ಎಸ್.‌ ನಾಗಭೂಷಣ್‌ ಅವರು ಬೆಂಗಳೂರಿನಲ್ಲಿ 1952ರಲ್ಲಿ ಜನಿಸಿದ್ದರು. ಅಕಾಶವಾಣಿ ದೆಹಲಿ ಕೇಂದ್ರದಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ 1981ರವರೆಗೆ ಸೇವೆ ಸಲ್ಲಿಸಿದ್ದಾರೆ. ನಂತರ ನಿಲಯದ ಸಹಾಯಕ ನಿರ್ದೇಶಕರಾಗಿ 7 ವರ್ಷ ಸೇವೆ ಸಲ್ಲಿಸಿದ್ದರು.

ಅವರ “ಗಾಂಧಿ ಕಥನ” ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಿಕ್ಕಿದೆ.

‘ಇಂದಿಗೆ ಬೇಕಾದ ಗಾಂಧಿ’, ‘ಲೋ ಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಗಾಂಧಿ ಕಥನ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಪತ್ನಿ ಸವಿತಾ ನಾಗಭೂಷಣ ಅವರೊಂದಿಗೆ ಶಿವಮೊಗ್ಗದಲ್ಲಿ ನೆಲೆಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News