×
Ad

ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Update: 2022-05-19 10:48 IST
ಡಿ.ಎಸ್.ನಾಗಭೂಷಣ್ 

ಬೆಂಗಳೂರು, ಮೇ 19: ಹಿರಿಯ ಲೇಖಕ, ಚಿಂತಕ, ಹೋರಾಟಗಾರ ಡಿ.ಎಸ್.ನಾಗಭೂಷಣ್ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ‌ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಡಿ.ಎಸ್.ನಾಗಭೂಷಣ್ ಅವರ 'ಗಾಂಧಿ ಕಥನ' ವನ್ನು‌ ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು. ಲೋಹಿಯಾ ಚಿಂತನೆಯ‌‌ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌‌‌‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News