ಸಮಾಜವಾದಿ ಪಕ್ಷದ ನಾಯಕ ಅಝಂ ಖಾನ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Update: 2022-05-19 06:44 GMT

ಹೊಸದಿಲ್ಲಿ: ಸಮಾಜವಾದಿ ಪಕ್ಷದ ನಾಯಕ ಅಝಂ ಖಾನ್‌ಗೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಉತ್ತರ ಪ್ರದೇಶದ ರಾಂಪುರದ ಕೊತ್ವಾಲಿ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎಸ್‌ಪಿ ನಾಯಕನಿಗೆ ಜಾಮೀನು ನೀಡಲಾಗಿದೆ.

ಎಸ್‌ಪಿ ನಾಯಕ ಅಝಂ ಖಾನ್ ಅವರು ಎರಡು ವಾರಗಳ ಅವಧಿಯಲ್ಲಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸಕ್ಷಮ ನ್ಯಾಯಾಲಯವು ಸಾಮಾನ್ಯ ಜಾಮೀನಿನ ಬಗ್ಗೆ ನಿರ್ಧರಿಸುವವರೆಗೆ ಮಧ್ಯಂತರ ಜಾಮೀನು ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಮಾಜವಾದಿ ಪಕ್ಷದ ನಾಯಕನಿಗೆ ಜಾಮೀನು  ನಿರಾಕರಿಸುವಂತೆ ಉತ್ತರ ಪ್ರದೇಶ ಸರಕಾರ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ ಎರಡು ದಿನಗಳ ನಂತರ ಅಝಂ ಖಾನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಆದಿತ್ಯನಾಥ್ ಸರಕಾರವು ಮಂಗಳವಾರ ಅಝಂ ಖಾನ್ ಅವರು "ಭೂಗಳ್ಳ" ಹಾಗೂ  ''ಅಪರಾಧಿ" ಎಂದು ಆರೋಪಿಸಿ   ಜಾಮೀನಿಗೆ ವಿರೋಧ ವ್ಯಕ್ತಪಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News