ಮಳೆ ಅವಾಂತರ: ನೀರು ನುಗ್ಗಿದ ಜೆ.ಸಿ. ನಗರ ಬಡಾವಣೆಯಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

Update: 2022-05-19 06:43 GMT

ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆ.ಸಿ. ನಗರ ಬಡಾವಣೆಯಲ್ಲಿ ನೀರು ನುಗ್ಗಿದ ಸ್ಥಳಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ನೀರು ನುಗ್ಗಿದ ಮನೆಗಳಿಗೆ ಭೇಟಿ ನೀಡಿ ಸಂಕಷ್ಟಕ್ಕೀಡಾದವರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ಕ್ಷೇತ್ರದ ಶಾಸಕರೂ ಆಗಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯ, ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News