ಜಿ.ಟಿ.ದೇವೇಗೌಡರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್, ಸಚಿವ ಸೋಮಶೇಖರ್ ಭೇಟಿ
Update: 2022-05-19 12:25 IST
ಮೈಸೂರು, ಮೇ 19: ಶಾಸಕ ಜಿ.ಟಿ.ದೇವೇಗೌಡ ಅವರ ಮೈಸೂರಿನಲ್ಲಿರುವ ನಿವಾಸಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುರುವಾರ ಬೆಳಗ್ಗೆ ಭೇಟಿ ನೀಡಿದರು.
ಮೊಮ್ಮಗಳ ನಿಧನದಿಂದ ದುಃಖತಪ್ತರಾಗಿರುವ ಜಿ.ಟಿ.ದೇವೇಗೌಡ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ನಿರಂಜನ್, ಮಹೇಶ್, ಮಾಜಿ ಸಚಿವ ವಿಜಯ್ ಶಂಕರ್, ಮೂಡಾ ಅಧ್ಯಕ್ಷ ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.