×
Ad

ಪತ್ನಿಗೆ ಕಿರುಕುಳ ಆರೋಪ: ರವಿ ಡಿ.ಚನ್ನಣ್ಣನವರ್ ಸಹೋದರನ ಮೇಲೆ ಎಫ್‍ಐಆರ್

Update: 2022-05-19 17:13 IST

ಬೆಂಗಳೂರು, ಮೇ 19: ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿರುವ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ರವಿ ಚೆನ್ನಣ್ಣನವರ್ ಸಹೋದರ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

2015ರಲ್ಲಿ ರೋಜಾ ಮತ್ತು ರಾಘವೇಂದ್ರ ಚನ್ನಣ್ಣನವರ್ ಮದುವೆಯಾಗಿದ್ದು, ರೋಜಾ ಮದುವೆಗೂ ಮುನ್ನ ಮತ್ತೊಬ್ಬ ಮಹಿಳೆಯೊಂದಿಗೆ ರಾಘವೇಂದ್ರ ಮದುವೆಯಾಗಿದ್ದಾನೆ ಎನ್ನಲಾಗಿದೆ. ಆದರೆ, ಈ ವಿಷಯವನ್ನು ಮುಚ್ಚಿಟ್ಟಿದ್ದರು. ಮದುವೆಯಾದ ಒಂದೇ ವರ್ಷದಲ್ಲಿ ರೋಜಾ ಅವರನ್ನು ಬಿಟ್ಟಿದ್ದು, ಮೊದಲು ಮದುವೆಯಾಗಿದ್ದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಭಂಧ ತನಗೆ ನ್ಯಾಯ ಬೇಕೆಂದು ಪೊಲೀಸ್ ಠಾಣೆಗೆ ರೋಜಾ ದೂರು ನೀಡಿದ್ದು, ಅದರನ್ವಯ ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್‍ಐಆರ್ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News