ಪಿಎಸ್‍ಐ ಮರು ಪರೀಕ್ಷೆ ಆದೇಶ ರದ್ದು ಕೋರಿ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಕೋರ್ಟ್ ಸೂಚನೆ

Update: 2022-05-19 14:46 GMT

ಬೆಂಗಳೂರು, ಮೇ 19: ಪಿಎಸ್‍ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಸ್‍ಎಟಿ) ಸರಕಾರಕ್ಕೆ ಮೇ 24ರವರೆಗೆ ಕಾಲಾವಕಾಶ ನೀಡಿದೆ.

ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಅಧಿಸೂಚನೆ ಅನುಸಾರವೇ ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಎಲ್.ಎನ್.ಪವಿತ್ರಾ ಸೇರಿ 28 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಕೆಎಟಿಯ ನ್ಯಾಯಪೀಠ, ವಿಚಾರಣೆ ನಡೆಸಿತು. 

ಪಿಎಸ್‍ಐ ಮರು ಪರೀಕ್ಷೆ ನಡೆಸಲು ಇನ್ನೂ ಸಾಕಷ್ಟು ಕಾಲಾವಕಾಶ ಬೇಕಿದೆ. ಹೀಗಾಗಿ, ಸದ್ಯಕ್ಕೆ ಮಧ್ಯಂತರ ಆದೇಶದ ಅಗತ್ಯವಿಲ್ಲ ಎಂದು ಸರಕಾರಿ ಪರ ವಕೀಲರು ಪೀಠಕ್ಕೆ ತಿಳಿಸಿದರು. ಅದನ್ನು ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಕಾಲಾವಕಾಶ ನಿಡಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News