ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಏನು: ನಳೀನ್ ಕುಮಾರ್ ಕಟೀಲ್ ಪ್ರಶ್ನೆ

Update: 2022-05-19 16:11 GMT

ಮೈಸೂರು,ಮೇ.19:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭಾಗದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದರು.

ವಿಜಯ ನಗರದ ಬಂಟರ ಸಮುದಾಯ ಭವನದಲ್ಲಿ ಬಿಜೆಪಿ ಗುರುವಾರ ಏರ್ಪಡಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇವಲ 8 ವರ್ಷಗಳಲ್ಲಿ  ರಸ್ತೆ, ಮೂಲ ಸೌಲಭ್ಯ ಸೇರಿದಂತೆ ವಿವಿಧ ಪ್ರಗತಿ ಕೆಲಸಗಳ ಮೂಲಕ ಮೈಸೂರು ಅಭಿವೃದ್ಧಿ ಕುರಿತು ಒಡೆಯರ್ ಕಂಡ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದಾರೆ. ಆದರೆ ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯ ಮೈಸೂರಿನ ಪ್ರತಿನಿಧಿಯಾಗಿ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮೈಸೂರಿನ ಒಡೆಯರ್ ಕುಟುಂಬಕ್ಕೆ ಅವಮಾನ ಮಾಡಿದವರನ್ನು ಮೈಸೂರಿನ ಜನತೆ ಇನ್ನೂ ಇರಿಸಿಕೊಂಡು ರಾಜಕಾರಣ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಕಡೆಯಾಗಿದ್ದಾರೆ ಇಷ್ಟೊತ್ತಿಗೆ ಊರಿನಿಂದಲ್ಲೇ ಓಡಿಸಿ ಬಿಡುತ್ತಿದ್ದೇವು ಎಂದು ಪರೋಕ್ಷವಾಗಿ ಮಾಜಿ ಸಿಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಬಿಜೆಪಿಯ ಕಾರ್ಯಕರ್ತರ ಗೌರವ ಮತ್ತು ಪ್ರಶ್ನೆಯಾಗಿದ್ದು, ಮೈಸೂರನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕಿದೆ ಎಂದು ಹೇಳಿದರು.
ಈ  ಬಾರಿಯ ವಿಧಾನಪರಿಷತ್ ಚುನಾವಣೆ ಬಿಜೆಪಿಯ ಪರವಾದ ಅಲೆಯಿದ್ದು, ನಾಲ್ಕು ಸ್ಥಾನಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸತತ ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಂದ ಬೇರೆ ವರ್ಗದ ಜನರಿಗೆ ಇರಲಿ. ಕುರುಬ ಸಮುದಾಯಕ್ಕೆ ಏನು ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ನಂತರ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ದಕ್ಷಿಣ ಪಧವೀದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ನಾಮಪತ್ರ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಸಿ.ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ಎನ್.ಮಹೇಶ್, ಪ್ರೀತಂ ಗೌಡ, ನಿರಂಜನ್ ಕುಮಾರ್, ರವಿ ಕುಮಾರ್, ಮಾಜಿ ಎಂಎಲ್‍ಸಿ ಸಿದ್ದರಾಜು, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್, ರಾಜೇಂದ್ರ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News