‘ಯಂಗ್ ಇಂಡಿಯಾ ಕೆ ಬೋಲ್’ ಭಾಷಣ ಸ್ಪರ್ಧೆ: ಬಿ.ವಿ.ಶ್ರೀನಿವಾಸ್

Update: 2022-05-19 18:28 GMT

ಬೆಂಗಳೂರು, ಮೇ 19: ‘ರಾಜ್ಯದ ಯುವಕರು ತಮ್ಮ ನೋವು, ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು, ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಒಂದು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ‘ಯಂಗ್ ಇಂಡಿಯಾ ಕೆ ಬೋಲ್’ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ' ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯಾಧ್ಯಕ್ಷ ಬಿ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಕ್ವೀನ್ಸ್‍ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯದಲ್ಲಿ ಯುವಕರಿಗೆ ವೇದಿಕೆ ಕಲ್ಪಿಸಬೇಕು. ಯುವ ಕಾಂಗ್ರೆಸ್ ಕೇವಲ ಧರಣಿ, ಹೋರಾಟಗಳನ್ನು ಮಾಡುವುದರ ಜೊತೆಗೆ ಇತರೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಈ ಕಾರ್ಯಕ್ರಮವು ಒಂದಾಗಿದೆ. ಈ ಕಾರ್ಯಕ್ರಮದ ಮೊದಲ ಅವತರಣಿಕೆ ಸಾಕಷ್ಟು ಯಶಸ್ಸು ಕಂಡಿದ್ದು, ಅನೇಕ ಯುವಕರ ಪ್ರಬುದ್ಧ ಮಾತುಗಳನ್ನು ಕೇಳಬಹುದು' ಎಂದು ಹೇಳಿದರು.

ಭಾರತ ರಾಷ್ಟ್ರೀಯ ಯೂಥ್ ಕಾಂಗ್ರೆಸ್‍ನ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಎಐಸಿಸಿ ಜಂಟಿ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೃಷ್ಣ ಅಲವರು, ರಾಜ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಹ್ಯಾರಿಸ್ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಈ ಸ್ಪರ್ಧೆಯ ಉಸ್ತುವಾರಿಯಾಗಿರುವ ಭವ್ಯ, ಉಪಾಧ್ಯಕ್ಷರಾದ ದೀಪಿಕಾ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಚೈತ್ರಾ, ಮಾರುತಿ, ಎಐಸಿಸಿ ವಕ್ತಾರರು ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಐಶ್ವರ್ಯ ಮಹದೇವ್, ಪ್ರಧಾನ ಕಾರ್ಯದರ್ಶಿಗಳಾದ ಆಶಿಕ್ ಗೌಡ ಅವರು ಉಪಸ್ಥಿತರಿದ್ದರು.

ಕರ್ನಾಟಕದ ಯುವಕರು ತಮ್ಮ ಮಾತುಗಳು, ಅಭಿಪ್ರಾಯವನ್ನು ಹಂಚಿಕೊಳ್ಳಲು ಅವಕಾಶ ಇಲ್ಲ. ಹೀಗಾಗಿ ನಾವು ಆ ವೇದಿಕೆಯನ್ನು ನೀಡುತ್ತಿದ್ದೇವೆ. ಇನ್ನು ಈ ವೇದಿಕೆಯಲ್ಲಿ ಕಾಂಗ್ರೆಸ್ ವಿಚಾರವನ್ನು ಜನರಿಗೆ ಮುಟ್ಟಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಸ್ಪರ್ಧಿಗೆ ಮೊದಲೇ ವಿಷಯಗಳನ್ನು ನೀಡುತ್ತೇವೆ. ಆ ವಿಚಾರದ ಮೇಲೆ ಅವರು ಮಾತನಾಡುತ್ತಾರೆ. ಈ ಸ್ಪರ್ಧೆಯಲ್ಲಿ ಅರ್ಹರನ್ನು ತೀರ್ಪುಗಾರರನ್ನಾಗಿ ಮಾಡುತ್ತೇವೆ. ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ದಿನಾಂಕವನ್ನು ಪ್ರಕಟಿಸಲಾಗುವುದು' ಎಂದು ತಿಳಿಸಿದರು.

ಬೇರೆ ಪಕ್ಷಗಳಲ್ಲಿ ವಕ್ತಾರರ ಕೆಲಸ ಎಂದರೆ ಸುಳ್ಳನ್ನೇ ನಿಜ ಮಾಡುವುದಾಗಿದೆ. ಅವರಿಗೆ ವಾಟ್ಸಪ್, ಫೇಸ್‍ಬುಕ್‍ನಲ್ಲಿ ಬರುವ ಸುಳ್ಳನ್ನು ನಿಜ ಮಾಡುವ ಕೆಲಸ ಮಾಡುತ್ತಾರೆ. ನಮ್ಮ ವೇದಿಕೆಯಲ್ಲಿ ಅವರ ಅಭಿಪ್ರಾಯ, ಜ್ಞಾನವನ್ನು ಪ್ರಸ್ತುತ ಪಡಿಸಲು ಅವಕಾಶ ನೀಡಲಾಗುವುದು. ರಾಜ್ಯಮಟ್ಟದಲ್ಲಿ ಗೆದ್ದವರನ್ನು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ರಾಜ್ಯದ ಯುವಕರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿದ್ದ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲವರು ಮಾತನಾಡಿ, ‘ಬೆಂಗಳೂರಿಗೆ ಬಂದಿರುವುದು ಸಂತೋಷ. ಈ ಕಾರ್ಯಕ್ರಮ ಅನಾವರಣ ಮಾಡಲು ಬಂದಿದ್ದೇವೆ. ಈ ಕಾರ್ಯಕ್ರಮದ ಬಗ್ಗೆ ಹೇಳುವುದಾದರೆ, ರಾಜಕಾರಣದ ಬಗ್ಗೆ ಯುವಕರಲ್ಲಿ ಆಸಕ್ತಿ ಮೂಡಿಸಿ ಅವರಿಗೆ ಲಭ್ಯವಾಗುವಂತೆ ಮಾಡುವುದು ರಾಷ್ಟ್ರೀಯ ಯುವ ಕಾಂಗ್ರೆಸ್ ಕರ್ತವ್ಯವೆಂದು ಭಾವಿಸಿದೆ. ರಾಜಕಾರಣ ಚುನಾವಣೆಯಲ್ಲಿ ಆರಂಭವಾಗಿ ಚುನಾವಣೆಯಲ್ಲೇ ಅಂತ್ಯವಾಗುತ್ತದೆ ಎಂದು ಸಾಕಷ್ಟು ಬಾರಿ ಹೇಳುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಕ್ಕೆ ಹಲವು ಆಯಾಮಗಳಿದ್ದು, ಯುವಕರು ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕೆಂಬುದು ರಾಷ್ಟ್ರೀಯ ಯುವ ಕಾಂಗ್ರೆಸ್‍ನ ಜವಾಬ್ದಾರಿಯಾಗಿದೆ' ಎಂದು ತಿಳಿಸಿದರು.

ಬೆಲೆ ಏರಿಕೆ ಬಗ್ಗೆ ಪ್ರಧಾನಿ ಪ್ರಶ್ನಿಸಬೇಕು: ‘ಯುವಕರು ನಿರುದ್ಯೋಗ, ಹಣದುಬ್ಬರ, ಭದ್ರತೆ, ಮಹಿಳಾ ವಿಚಾರ, ರೈತರ ವಿಚಾರ, ವ್ಯಾಪಾರದ ವಿಚಾರಗಳಲ್ಲಿ ಯುವಕರು ತಮ್ಮ ಧ್ವನಿ ಎತ್ತಿ ಸರಕಾರವನ್ನು ಪ್ರಶ್ನಿಸುವಂತಾಗಬೇಕು. ದೇಶದ ಯುವಕರು ನಿರುದ್ಯೋಗದ ನೋವು ಅನುಭವಿಸುತ್ತಿದ್ದರೆ, 8 ವರ್ಷಗಳಾದರೂ ನಿರುದ್ಯೋಗ ದಾಖಲೆ ಪ್ರಮಾಣದ ಏರಿಕೆಯಾಗಿರುವುದು ಏಕೆ? ಎಂದು ಪ್ರಧಾನಿಗೆ ಪ್ರಶ್ನೆ ಮಾಡುವಂತಾಗಬೇಕು. ಇನ್ನು ಬೆಲೆ ಏರಿಕೆಯ ಬಿಸಿ ತಟ್ಟಿದ್ದರೆ ಯುವಕರು ಇದನ್ನು ಧೈರ್ಯವಾಗಿ ಪ್ರಶ್ನಿಸಲು ಒಂದು ವೇದಿಕೆ ಕಲ್ಪಿಸಬೇಕು. ಪೆಟ್ರೋಲ್, ಡೀಸೆಲ್ ದರ ಇಳಿಸಲು ಸಾಧ್ಯವಾಗುತ್ತಿಲ್ಲ ಏಕೆ ಎಂದು ಪ್ರಧಾನಿಯನ್ನು ಪ್ರಶ್ನಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕಾರ್ಯಕ್ರಮ ಯುವಕರು ಹಲವು ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಳ್ಳುವ ರಾಜಕೀಯ ವೇದಿಕೆಯಾಗಿದೆ. ಪ್ರತಿ ಯುವಕರು ಈ ವೇದಿಕೆಯ ಸದುಪಯೋಗಪಡಿಸಿಕೊಳ್ಳಬೇಕು, ತಮ್ಮ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕು ಎಂದು ಅವರು ತಿಳಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹಾರೀಸ್ ನಲಪಾಡ್ ಮಾತನಾಡಿ, ‘ಯುವಕರು ರಾಜ್ಯದ ಸಮಸ್ಯೆ, ಪ್ರಮುಖ ವಿಚಾರಗಳ ಬಗ್ಗೆ ತಮ್ಮ ಸಾಮಥ್ರ್ಯವನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಇತಿಹಾಸವನ್ನು ಜನರಿಗೆ ತಲುಪಿಸಲು ಉತ್ತಮ ವಾಕ್ಚಾತುರ್ಯವಿರುವ ಯುವಕರ ಅನ್ವೇಷಣೆಗೆ ಯುವ ಕಾಂಗ್ರೆಸ್ ಈ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಕಾರ್ಯಕ್ರಮದ ಮೊದಲ ಅವತರಣಿಕೆಯ ಅಂತಿಮ ಸ್ಪರ್ಧೆ ದಿಲ್ಲಿಯಲ್ಲಿ ಯಶಸ್ವಿಯಾಗಿ ನಡೆದಿತ್ತು. ರಾಜ್ಯದಿಂದ 15 ಯುವಕರು ಅದರಲ್ಲಿ ಭಾಗವಹಿಸಿ ಮೂವರು ಪ್ರಶಸ್ತಿ ಗೆದ್ದಿದ್ದರು. ಇಂತಹ ಉತ್ತಮ ಕಾರ್ಯಕ್ರಮವನ್ನು ರಾಜ್ಯದಲ್ಲಿಯೂ ಮಾಡಬೇಕು ಎಂಬ ಉದ್ದೇಶದೊಂದಿಗೆ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗುವುದು.

ಅಲ್ಲಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳು ಜೂನ್ 18ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಅಂತಿಮ ಸ್ಪರ್ಧೆ ನಡೆಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಗೆದ್ದವರು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿಜೇತರಾಗುವವರಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಬಹುಮಾನ ಐ-ಫೊನ್ 13 ಪ್ರೊ, ಎರಡನೆ ಬಹುಮಾನವಾಗಿ ಐ-ಫೊನ್ 13 ಹಾಗೂ ಮೂರನೆ ಬಹುಮಾನವಾಗಿ ಒನ್ ಪ್ಲಸ್ ಫೋನ್ ಅನ್ನು ನೀಡಲಾಗುವುದು. ಜೊತೆಗೆ 10 ಉತ್ತಮ ಭಾಷಣ ಮಾಡುವವರನ್ನು ಯೂವ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಲಾಗುವುದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರನ್ನು ಜಿಲ್ಲಾ ಮಟ್ಟದ ವಕ್ತಾರರನ್ನಾಗಿ ಆಯ್ಕೆ ಮಾಡಲಾಗುವುದು. ಈ ಸ್ಪರ್ಧೆಯ ಉಸ್ತುವಾರಿಯಾಗಿ ಉಪಾಧ್ಯಕ್ಷರಾದ ಭವ್ಯ ಹಾಗೂ ಸಿರಿಲ್ ಅವರನ್ನು ನೇಮಿಸಲಾಗಿದೆ. ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ಹೆಸರು ನೋಂದಾಯಿಸಿಕೊಳ್ಳಲು hಣಣಠಿs://ಥಿಛಿeಚಿ.iಟಿ/ಥಿouಟಿgiಟಿಜiಚಿ/iಟಿಜex.hಣmಟ ಜಾಲತಾಣಕ್ಕೆ ಭೇಟಿ ನೀಡಿ’ ಎಂದು ಅವರು ತಿಳಿಸಿದರು.

ಈ ವೇಳೆ ಸ್ಪರ್ಧೆಯ ಉಸ್ತುವಾರಿಯಾಗಿರುವ ಭವ್ಯಾ, ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಚೈತ್ರಾ, ಮಾರುತಿ, ಎಐಸಿಸಿ ವಕ್ತಾರರು ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಐಶ್ವರ್ಯ ಮಹದೇವ್, ಪ್ರಧಾನ ಕಾರ್ಯದರ್ಶಿ ಆಶಿಕ್ ಗೌಡ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News