ಪೆಗಾಸಸ್‌ ಪ್ರಕರಣಕ್ಕೆ ಸಂಬಂಧಿಸಿ ಜೂನ್‌ 20ರೊಳಗೆ ವರದಿ ಸಲ್ಲಿಸುವಂತೆ ತನಿಖಾ ಸಮಿತಿಗೆ ಸುಪ್ರೀಂಕೋರ್ಟ್‌ ಸೂಚನೆ

Update: 2022-05-20 06:44 GMT

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನೇಮಿಸಿದ ತಾಂತ್ರಿಕ ಸಮಿತಿಯು ಪೆಗಾಸಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ತಾಂತ್ರಿಕ ಸಮಿತಿಯು ತನ್ನ ವರದಿಯನ್ನು ಮೇ ಅಂತ್ಯದೊಳಗೆ ಮೇಲ್ವಿಚಾರಣಾ ನ್ಯಾಯಾಧೀಶರಿಗೆ ಸಲ್ಲಿಸುವಂತೆ ಸೂಚಿಸಿದೆ.

ನಂತರ ಮೇಲ್ವಿಚಾರಣಾ ನ್ಯಾಯಾಧೀಶರು ತಾಂತ್ರಿಕ ಸಮಿತಿಯ ವರದಿಯನ್ನು ಅಧ್ಯಯನ ಮಾಡಿ ಜೂನ್ 20 ರೊಳಗೆ ನ್ಯಾಯಾಲಯಕ್ಕೆ ತಮ್ಮ ಅಭಿಪ್ರಾಯವನ್ನು ನೀಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸ್ಪೈವೇರ್‌ ಪತ್ತೆಹಚ್ಚಲು 29 'ಸೋಂಕಿತ' ಮೊಬೈಲ್ ಫೋನ್‌ಗಳನ್ನು ಪರೀಕ್ಷಿಸಲಾಗಿದೆ ಮತ್ತು ಕೆಲವು ಅರ್ಜಿದಾರರು, ಕಾರ್ಯಕರ್ತರು ಮತ್ತು ಪತ್ರಕರ್ತರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ತಾಂತ್ರಿಕ ಸಮಿತಿಯು ಉನ್ನತ ನ್ಯಾಯಾಲಯಕ್ಕೆ ತಿಳಿಸಿದೆ.

ಜುಲೈ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ವಿಚಾರಣೆ ನಡೆಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News