ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

Update: 2022-05-20 09:10 GMT

ಮೈಸೂರು, ಮೇ 20: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅವರ ವಿರುದ್ಧ ನಾಲ್ಕು ಆರೋಪಗಳು ಕೇಳಿಬಂದಿದ್ದವು.

ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ನೇಮಿಸಲಾಗಿದ್ದು, 30 ದಿನಗಳ ಒಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಹಣ ತೆತ್ತು ಪರಿಸರಸ್ನೇಹಿ ಬಟ್ಟೆ ಬ್ಯಾಗ್ ಖರೀದಿಸಿದ್ದು, ಜಿಲ್ಲಾಧಿಕಾರಿ ನಿವಾಸದಲ್ಲಿ 50 ಲಕ್ಷ ರೂ. ಖರ್ಚು ಮಾಡಿ ಅನಧಿಕೃತವಾಗಿ ಈಜುಕೊಳ ಮತ್ತು ಜಿಮ್ ನಿರ್ಮಿಸಿದ್ದು, ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿದ್ದು ಮತ್ತು ಚಾಮರಾಜನಗರದಲ್ಲಿ ಆಮ್ಲಜನಕ ಪೂರೈಕೆ ವ್ಯತ್ಯಯದಿಂದ ಸಂಭವಿಸಿದ ಸಾವುಗಳಿಗೆ ಕಾರಣವಾದ ಆರೋಪಗಳು ರೋಹಿಣಿ ಸಿಂಧೂರಿ ವಿರುದ್ಧ ಕೇಳಿಬಂದಿವೆ.

ಇದನ್ನೂ ಓದಿ:  ಬ್ಯಾಗ್ ಖರೀದಿಯಲ್ಲಿ ಅಕ್ರಮ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ಆರೋಪ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News