ಶೀಘ್ರದಲ್ಲೇ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-05-20 10:36 GMT

ಬೆಂಗಳೂರು: ಮುಂದಿನ ಎಂಟು ವಾರಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP) ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಎಂಟು ವಾರಗಳಲ್ಲಿ ವಾರ್ಡ್‌ ಪುನರ್‌ ವಿಂಗಡಣೆ ಮಾಡಿ, ಒಬಿಸಿ ಮಿಸಲಾತಿಯನ್ನೂ ನಿಗದಿಪಡಿಸಿ ಬಿಬಿಎಂಪಿಗೆ ಚುನಾವಣೆ ನಡೆಸುವುದಾಗಿ ತಿಳಿಸಿದರು.

ಈ ಸಂಬಂಧ ಸಮಿತಿ ಕೂಡ ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆಯನ್ನ ಮಾಡುತ್ತೇವೆ. ಹಿಂದಿನ ಆದೇಶದಲ್ಲಿ ಮೀಸಲಾತಿ ಇಲ್ಲ ಅಂತ ತೀರ್ಪು ನೀಡಿತ್ತು. ನಂತರ ಒಬಿಸಿ ಮೀಸಲಾತಿ ಸಹಿತ ಚುನಾವಣೆ ಮಾಡಲು ಸೂಚನೆ ನೀಡಿದೆ. ನಾವು ಕೂಡ ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಲ್ಲ ಅಂತ ಹೇಳಿದ್ದೆವು. ಈಗ ನಮ್ಮ ಮನ್ನಣೆಯಂತೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ದೊರೆತಿದೆ. ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News