ಕೋಟ್ಪಾ ತಂಡದಿಂದ ದಾಳಿ: ದಂಡ ವಸೂಲಿ

Update: 2022-05-20 14:21 GMT

ಉಡುಪಿ : ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದವರು ಕೋಟ್ಪಾ ಕಾಯಿದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕಿನ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ ೪,೬(ಎ) ಮತ್ತು ೬(ಬಿ) ಅಡಿಯಲ್ಲಿ ೨೮ ಪ್ರಕರಣ ದಾಖಲಿಸಿ ೨,೧೦೦ ರೂ. ದಂಡ ವಸೂಲಿ ಮಾಡಿದ್ದ ಲ್ಲದೇ, ೧೨ಅಂಗಡಿಗಳಿಗೆ ಫುಡ್ ಲೈಸನ್ಸ್ ಮಾಡುವಂತೆ ನೋಟೀಸು ನೀಡಿದರು.

ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಕೆ.ಎಸ್.ವೆಂಕಟೇಶ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಎನ್‌ಟಿಸಿಪಿ ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರು, ಎಎಸ್‌ಐ ಶೀನ ಸಾಲಿಯಾನ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News