ಯುವಕ ನಾಪತ್ತೆ

Update: 2022-05-20 14:28 GMT

ಉಡುಪಿ : ಲಲಿತ ಇಂಜಿನಿಯರ್ಸ್‌ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟ್ರೀಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ಯುವಕ ಮೇ 17ರಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 

೬ಅಡಿ ೨ ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News