ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Update: 2022-05-20 15:15 GMT

ಬೆಂಗಳೂರು, ಮೇ 20: ಕಾಲೇಜೊಂದರ ಬಳಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2 ಲಕ್ಷ ರೂ.ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. 

ಜೀವನ್ ಭೀಮಾನಗರ ವ್ಯಾಪ್ತಿಯ ಕಾಲೇಜೊಂದರ ಆಟದ ಮೈದಾನದ ಬಳಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳೊಂದಿಗೆ ಈ ಇಬ್ಬರು ಪೆಡರ್ ಗಳು ಸೇರಿಕೊಂಡು ಕೆಜಿ ಗಟ್ಟಲೆ ಗಾಂಜಾವನ್ನು ಕಡಿಮೆ ಬೆಲೆಗೆ ನಗರಕ್ಕೆ ತರಿಸಿಕೊಂಡು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ, ಪರಿಚಯಸ್ಥ ಗ್ರಾಹಕರಿಗೆ ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು 10 ಗ್ರಾಂಗೆ 1500ರಿಂದ 2 ಸಾವಿರದವರೆಗೆ ಮಾರಾಟ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಜೀವನ್ ಭೀಮಾನಗರ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News