ವಾರಣಾಸಿಯ ಜ್ಞಾನವಾಪಿ ಕುರಿತು ಪೋಸ್ಟ್: ದಿಲ್ಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕನ ಬಂಧನ

Update: 2022-05-21 05:00 GMT
Photo: Indian express

ಹೊಸದಿಲ್ಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ 'ಶಿವಲಿಂಗ'ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ದಿಲ್ಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರೊಬ್ಬರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿರುವುದಾಗಿ NDTV ವರದಿ ಮಾಡಿದೆ.

ಹಿಂದೂ ಕಾಲೇಜಿನಲ್ಲಿ ಕೆಲಸ ಮಾಡುತ್ತಿರುವ ರತನ್ ಲಾಲ್ ಅವರನ್ನು ಉತ್ತರ ದಿಲ್ಲಿಯ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇತಿಹಾಸದ ಪ್ರಾಧ್ಯಾಪಕ ಪ್ರೊಫೆಸರ್ ರತನ್ ಲಾಲ್ ಅವರು ಮಂಗಳವಾರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ ಹಾಗೂ  ಆಕ್ಷೇಪಾರ್ಹ ಕಾಮೆಂಟ್ ಗಳನ್ನು ಮಾಡಿದ್ದಾರೆ.

 ದಿಲ್ಲಿ ಮೂಲದ ವಕೀಲರೊಬ್ಬರು ನೀಡಿದ ಪೊಲೀಸ್ ದೂರಿನ ಮೇರೆಗೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ತಮ್ಮ ಟ್ವಿಟರ್ ಖಾತೆಯಲ್ಲಿ ನೀಡಿರುವ ಹೇಳಿಕೆಯು "ಪ್ರಚೋದನಕಾರಿ. ಈ ವಿಚಾರವು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದ್ದು, ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು  ತಿಳಿಸಿದ್ದಾರೆ.

ಪ್ರೊಫೆಸರ್ ಬಂಧನವನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಖಂಡಿಸಿದ್ದಾರೆ.
"ಪ್ರೊ. ರತನ್ ಲಾಲ್ ಅವರ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರಿಗೆ ಅಭಿಪ್ರಾಯ ಮತ್ತು ಅಭಿವ್ಯಕ್ತಿಯ ಸಾಂವಿಧಾನಿಕ ಹಕ್ಕು ಇದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News