ಉಳ್ಳಾಲ: ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಯಿ-ಮಗಳು ಉತ್ತೀರ್ಣ

Update: 2022-05-21 13:13 GMT

ಉಳ್ಳಾಲ: ಎಸೆಸೆಲ್ಸಿ ಪರೀಕ್ಷೆ ಬರೆದ ತಾಯಿ-ಮಗಳು ಇಬ್ಬರು ಕೂಡ ಉತ್ತೀರ್ಣರಾಗಿದ್ದಾರೆ.

ಮುನ್ನೂರು ಗ್ರಾಮದ ತೇವುಲ ನಿವಾಸಿ ಮಮತಾ ರಮೇಶ್ ಎಸೆಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರ ಪುತ್ರಿ ಖುಷಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

21 ವರ್ಷಗಳ ಹಿಂದೆ ವಿದ್ಯಾರ್ಥಿ ಜೀವನದಲ್ಲಿ ಎಸೆಸೆಲ್ಸಿ ಕಲಿಯುವ ಅವಕಾಶದಿಂದ ಮಮತಾ ವಂಚಿತರಾಗಿದ್ದರು. ಇದರ ಬಳಿಕ ಮೂರು ವರ್ಷಗಳ ಹಿಂದೆ ಪರೀಕ್ಷೆ ಬರೆದರೂ ಯಶಸ್ವಿಯಾಗಿರಲಿಲ್ಲ. ಅಂಗನವಾಡಿ ಶಿಕ್ಷಕಿಯಾಗಲು ಎಸೆಸೆಲ್ಸಿ ವಿದ್ಯಾರ್ಹತೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಮನಸ್ಸು ಮಾಡಿ ಪರೀಕ್ಷೆಗೆ ಬರೆದಿದ್ದಾರೆ.

ಕುತ್ತಾರ್ ಲಚ್ಚಿಲ್ ಅಂಗನವಾಡಿಯಲ್ಲಿ ಸಹಾಯಕಿಯಾಗಿದ್ದ ಮಮತಾ ಅವರಿಗೆ ಬಬ್ಬುಕಟ್ಟೆಯ ಹೀರಾ ಮಹಿಳಾ ಕಾಲೇಜಿನ ಸಹಾಯಕ ಪ್ರಾಂಶುಪಾಲೆ ಭಾಗೀರಥಿ ಅವರ ಪರಿಚಯವಾಗಿತ್ತು. ಅವರ ನಿರ್ದೇಶನದಂತೆ ಪರೀಕ್ಷೆಗೆ ಸಿದ್ಧತೆ ನಡೆಸಿದ ಮಮತಾ ಡಿಸೆಂಬರ್ ತಿಂಗಳಿನಿಂದ ಪರೀಕ್ಷೆ ಮುಗಿಸುವವರೆಗೂ ಭಗೀರಥಿ ಅವರ ಮನೆಯಲ್ಲೇ ಉಚಿತವಾಗಿ ತರಬೇತಿಯನ್ನು ಪಡೆದಿದ್ದಾರೆ. ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಪರೀಕ್ಷೆ ಶುಲ್ಕ ಕಟ್ಟಿದ್ದ ಮಮತಾ ಅವರು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News