×
Ad

ಚುನಾವಣೆಗಳನ್ನು ಎದುರಿಸಲು ಬಿಜೆಪಿ ಸಿದ್ಧ: ನಳಿನ್ ಕುಮಾರ್ ಕಟೀಲ್

Update: 2022-05-21 17:37 IST
ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಮೇ 21: ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಪಕ್ಷವು ಸನ್ನದ್ಧ ಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷವು ಬೆಂಗಳೂರಿನಲ್ಲಿ ಗರಿಷ್ಠ ಸಂಸದರನ್ನು ಮತ್ತು ಶಾಸಕರನ್ನು ಹೊಂದಿದೆ. ಅಲ್ಲದೆ, ಸಂಘಟನೆಯಾಗಿ ಪಕ್ಷವು ಅತ್ಯಂತ ಬಲಿಷ್ಠವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಜನೋಪಯೋಗಿ ಕಾರ್ಯಗಳನ್ನು ಜನರ ಗಮನಕ್ಕೆ ತರುವ ಮೂಲಕ ಪಕ್ಷವು ಗರಿಷ್ಠ ಸ್ಥಾನಗಳನ್ನು ಗೆದ್ದು ಬಿಬಿಎಂಪಿಯಲ್ಲಿ ಅಧಿಕಾರಕ್ಕೇರಲಿದೆ ಎಂದು ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News