ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವರದಿ ಬಹಿರಂಗಕ್ಕೆ ಜೆಡಿಎಸ್ ಒತ್ತಾಯ

Update: 2022-05-21 14:12 GMT

ಮಂಗಳೂರು : ರಾಜ್ಯದಲ್ಲಿ ಪಠ್ಯಪುಸ್ತಕದಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯು ನೀಡಿದ ವರದಿಯನ್ನು ಸರಕಾರ ಬಹಿರಂಗಪಡಿಸಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಒತ್ತಾಯಿಸಿದ್ದಾರೆ

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನೀಡಿದ ವರದಿಯಿಂದ ಗೊಂದಲವಾಗಿದೆ. ಶೈಕ್ಷಣಿಕ ಕ್ಷೇತ್ರ ಹದಗೆಟ್ಟಿವೆ. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್, ಬ್ರಹ್ಮಶ್ರೀ ನಾರಾಯಣಗುರು, ಪೆರಿಯಾರ್, ಸ್ವಾಮಿ ವಿವೇಕಾನಂದ ರಂತಹವರ ಪಠ್ಯವನ್ನು ಹತ್ತನೇ ತರಗತಿಯಿಂದ ತೆಗೆಯಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. 

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಯಾವುದೇ ಕಾರಣಕ್ಕೂ ನಾರಾಯಣಗುರುಗಳ ಪಠ್ಯವನ್ನು ತೆರವು ಮಾಡುವುದಿಲ್ಲ ಎಂದಿದ್ದಾರೆ. ಆದಾಗ್ಯು ಅವರು ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಯನ್ನು ಭೇಟಿಯಾಗಿರುವುದು ಸಂಶಯಕ್ಕೆ ಎಡೆ ಮಾಡಿಕೊಡಿದೆ. ಹಾಗಾಗಿ ಸಮಿತಿಯು ನೀಡಿದ ವರದಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ವಿಟ್ಲ ಮುಹಮ್ಮದ್ ಕುಂಞ, ಸುಶೀಲ್ ನೊರೊನ್ಹಾ, ವಸಂತ ಪೂಜಾರಿ, ಪ್ರವೀಣ್ ಜೈನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News