ಮಂಗಳೂರು : ಮೇ 27ರಂದು ಖಾಸಗಿ ಕಂಪೆನಿಗಳ ನೇರ ಸಂದರ್ಶನ

Update: 2022-05-21 14:14 GMT

ಮಂಗಳೂರು : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಮೇ 27ರ ಬೆಳಗ್ಗೆ 10ರಿಂದ ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿಇ ಮತ್ತು ಬಿಸಿಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ: ೦೮೨೪- ೨೪೫೭೧೩೯ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News