ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

Update: 2022-05-21 16:12 GMT
 ಪ್ರಧಾನಿ ನರೇಂದ್ರ ಮೋದಿ (PTI)

ಮೈಸೂರು,ಮೇ.21: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ.

ಮೈಸೂರಿಗೆ ಪ್ರಧಾನಿ ಮೋದಿ ಆಗಮನ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News