ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

Update: 2022-05-21 17:10 GMT

ಬೆಂಗಳೂರು, ಮೇ 21: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪ ಪ್ರಕರಣ ಸಂಬಂಧ ಆರೋಪಿಯ ಜಾರ್ಮಿನು ಅರ್ಜಿಯನ್ನು ನಗರದ 67ನೆ ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ಆರೋಪಿ ರೆಹೆಮತವುಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ಮಾರ್ಚ್ 17ರಂದು ಮಧುರೈನಲ್ಲಿ ನಡೆದ ಸಮಾವೇಶದಲ್ಲಿ ತಮಿಳುನಾಡಿನ ತೌಹೀದ್ ಜಮಾತ್(ಟಿಎನ್‍ಟಿಜೆ) ಸಂಘಟನೆ ಮುಖಂಡ ರೆಹೆಮತವುಲ್ಲಾ ಹಿಜಾಬ್ ವಿಚಾರವಾಗಿ ನ್ಯಾಯಮೂರ್ತಿಗಳು ನೀಡಿದ್ದ ತೀರ್ಪುನ್ನು ವಿರೋಧಿಸಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿದೆ.

ವಿಡಿಯೊ ಆಧರಿಸಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ನಂತರ, ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಶನಿವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿ.ಪ್ರಕಾಶ್, ಜಾಮೀನು ತಿರಸ್ಕರಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಕೊಡಿಸಲು ನ್ಯಾಯಾಲಯದಲ್ಲಿ ಸೂಕ್ತವಾದ ಮಂಡಿಸಲಾಗುವುದು ಎಂದು ಉಲ್ಲೇಖಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News