ಕಳವು ಪ್ರಕರಣ; ಆರೋಪಿ ಸೆರೆ
Update: 2022-05-21 23:22 IST
ಉಳ್ಳಾಲ: ಇಲ್ಲಿನ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮ ಮದನಿ ನಗರದಲ್ಲಿ ಅಬ್ದುಲ್ ರಶೀದ್ ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮದನಿ ನಗರ ನಿವಾಸಿ ಕಬೀರ್ ತಸ್ಲಿಂ (25) ಎಂದು ಪೊಲೀಸರು ತಿಳಿಸಿದ್ದಾರೆ.
ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಈತನಿಗೆ ನ್ಯಾಯಾಲಯದ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಈತನನ್ನು ಗುರುವಾರ ಬಂಧಿಸಿ ವಿಚಾರಣೆ ನಡೆಸಿದಾಗ ಕಳವುಗೈದ ಪ್ರಕರಣ ಬೆಳಕಿಗೆ ಬಂದಿದೆ. ಕಳವಾದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.