ರಾಜೀವ್ ಗಾಂಧಿ 31ನೇ ಪುಣ್ಯತಿಥಿ:‌ ಮೋದಿ, ಸೋನಿಯಾ, ಇತರ ನಾಯಕರ ಶ್ರದ್ಧಾಂಜಲಿ

Update: 2022-05-21 17:55 GMT

ಹೊಸದಿಲ್ಲಿ,ಮೇ 21: ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಗಣ್ಯ ನಾಯಕರು ಮಾಜಿ ಪ್ರಧಾನಿ ರಾಜೀವ ಗಾಂಧಿಯವರ 31ನೇ ಪುಣ್ಯತಿಥಿಯಾದ ಶನಿವಾರ ಅವರಿಗೆ ಶ್ರದ್ಧಾಂಜಲಿಗಳನ್ನು ಸಲ್ಲಿಸಿದರು.

‘ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ ’ಎಂದು ಮೋದಿ ಟ್ವೀಟಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರೂ ದಿಲ್ಲಿಯ ವೀರಭೂಮಿಯಲ್ಲಿ ರಾಜೀವ ಗಾಂಧಿಯವರಿಗೆ ಶ್ರದ್ಧಾಂಜಲಿಗಳನ್ನು ಸಲ್ಲಿಸಿದರು.

1984ರಲ್ಲಿ ತನ್ನ ತಾಯಿ ಹಾಗೂ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆ ಬಳಿಕ ರಾಜೀವ ಕಾಂಗ್ರೆಸ್‌ನ ಸಾರಥ್ಯ ವಹಿಸಿಕೊಂಡಿದ್ದರು. 1944,ಆ.20ರಂದು ಜನಿಸಿದ್ದ ರಾಜೀವ ಗಾಂಧಿ 1984,ಅಕ್ಟೋಬರ್‌ನಲ್ಲಿ  ತನ್ನ 40ನೇ ವಯಸ್ಸಿನಲ್ಲಿ ಅಧಿಕಾರ ಸ್ವೀಕರಿಸಿದಾಗ ದೇಶದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು. 1989,ಡಿ.2ರವರೆಗೆ ದೇಶದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದ ರಾಜೀವ 1991,ಮೇ 21ರಂದು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ಚುನಾವಣಾ ರ್ಯಾಲಿಯ ಸಂದರ್ಭ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ಳಿಂದ ಹತ್ಯೆಯಾಗಿದ್ದರು. ಆಗ ಅವರಿಗೆ ಕೇವಲ 46 ವರ್ಷ ವಯಸ್ಸಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News