ಪಾವಗಡ: ಗೂಡಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

Update: 2022-05-22 04:05 GMT

ಪಾವಗಡ, ಮೇ 22: ತಾಲೂಕಿನ‌ ಶಾಂತಿ ನಗರದ ಗೂಡಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ವೆಂಕಟೇಶ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದೆ. ಇಂದು ಮುಂಜಾನೆ 3:30ರ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಯಾವುದೇ ಪ್ರಾಣಪಯವಿಲ್ಲ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ ಅಂಗಡಿಯಲ್ಲಿದ್ದ ಹಲವು ಸೊತ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News