ಧಾರವಾಡ | ಬಾಡ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ

Update: 2022-05-22 04:40 GMT

ಬೆಂಗಳೂರು, ಮೇ 22: ಧಾರವಾಡದ ಬಾಡ ಗ್ರಾಮದ ಬಳಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಒಂಭತ್ತು ಜನರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, "ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

ಧಾರವಾಡದ ಬಾಡ ಕ್ರಾಸ್ ಬಳಿ ಶನಿವಾರ ಟೆಂಪೋ ಟ್ರಾಕ್ಸ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಒಂಭತ್ತು ಮಂದಿ ಮೃತಪಟ್ಟಿದ್ದರು.

ಮನಸೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಬೆನಕನಕಟ್ಟಿಗೆ ಮರಳುತ್ತಿದ್ದರು. 21 ಜನರಿದ್ದ ವಾಹನ ನಿಗದಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News