ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟಿಎಂಸಿಗೆ ವಾಪಸ್ ಸಾಧ್ಯತೆ

Update: 2022-05-22 10:29 GMT
Photo:ANI

ಕೋಲ್ಕತಾ: ಪಶ್ಚಿಮ ಬಂಗಾಳದ ಬರಾಕ್‌ಪೋರ್‌ನ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಇತ್ತೀಚಿನ ರಹಸ್ಯ ಟ್ವೀಟ್‌ಗಳು ಅವರು ಪಕ್ಷದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಹಾಗೂ  ತೃಣಮೂಲ ಕಾಂಗ್ರೆಸ್‌ಗೆ ವಾಪಾಸುವ  ಸಾಧ್ಯತೆಯಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ರವಿವಾರ ಅರ್ಜುನ್ ಸಿಂಗ್ ಅವರು ತಮ್ಮ ಕಾರಿನಲ್ಲಿ ಕೋಲ್ಕತ್ತಾಗೆ ತಮ್ಮ ನಿವಾಸದಿಂದ ಹೊರಟಿದ್ದಾರೆ. ಕೋಲ್ಕತಾದಲ್ಲಿ ಅವರು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಅವರ ಕ್ಯಾಮಾಕ್ ಸ್ಟ್ರೀಟ್ ಕಚೇರಿಯಲ್ಲಿ ಸಂಜೆ 4 ಗಂಟೆಗೆ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರು ಸಿಂಗ್ ಅವರ ಸಂಪರ್ಕದಲ್ಲಿದ್ದು, ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಅರ್ಜುನ್ ಸಿಂಗ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲಿಕ್ "ಇದು ನಮ್ಮ ಪಕ್ಷದ ನೈತಿಕ ಗೆಲುವು. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಎಲ್ಲರೂ ಪಕ್ಷಕ್ಕೆ ಮರಳಿದರೆ ನಾವು ಅವರನ್ನು ಸ್ವಾಗತಿಸುತ್ತೇವೆ" ಎಂದು ಹೇಳಿದರು.

ಪಕ್ಷದಲ್ಲಿ ಪ್ರಮುಖ  ಸ್ಥಾನವನ್ನು ಹೊಂದಿದ್ದರೂ ಸರಿಯಾಗಿ ಕೆಲಸ ಮಾಡಲು ತನಗೆ ಅವಕಾಶ ನೀಡುತ್ತಿಲ್ಲ ಎಂದು ಸಿಂಗ್ ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವವನ್ನು ಈ ಹಿಂದೆ ತರಾಟೆಗೆ ತೆಗೆದುಕೊಂಡಿದ್ದರು.

ಸಿಂಗ್ ಅವರು 2019 ರಲ್ಲಿ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿಗೆ ಸೇರ್ಪಡೆಗೊಂಡರು ಹಾಗೂ  ಪಕ್ಷದ ಅಭ್ಯರ್ಥಿಯಾಗಿ ಬರಾಕ್‌ಪೋರ್‌ ಕ್ಷೇತ್ರದಲ್ಲಿ  ಸ್ಪರ್ಧಿಸಿ ಗೆದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News