ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ದಾಖಲಾತಿ ಆರಂಭ

Update: 2022-05-22 12:35 GMT

ಉಡುಪಿ : ಮಣಿಪಾಲ ಅನಂತ ನಗರದಲ್ಲಿರುವ ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ೨೦೨೨-೨೩ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ದಾಖಲಾತಿ ಆರಂಭಗೊಂಡಿದೆ.

ನುರಿತ ಶಿಕ್ಷಕರ ತಂಡ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುವುದು. ಆನ್‌ಲೈನ್ ಹಾಗೂ ಕಾಲೇಜಿನಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಎಸ್‌ಎಸ್‌ಎಲ್‌ಸಿ ಅಂಪಟ್ಟಿ, ಜಾತಿ ಮತುತಿ ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಹೈದರಾಬಾದ್ ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಎಚ್.ಆರ್.ಪುಷ್ಪಾ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಪನ್ಯಾಸಕ ಎ.ಜೈರಾಜ್ ಮಾತನಾಡಿ, ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರೋನಿಕ್ಸ್ ಮತ್ತು ಕಮ್ಯುನಿಕೇನ್ ಎಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿದೆ. ನುರಿತ ಮತ್ತು ಅನುಭವಿ ಉಪನ್ಯಾಸಕ ವೃಂದವಿದ್ದು, ಸುಸಜ್ಜಿತ ಆಧುನಿತ ತರಗತಿಗಳು, ಪ್ರಯೋಗಾಲಯ, ವಸತಿ ನಿಲಯ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದೆಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪನ್ಯಾಸಕರಾದ ವಂದನಾ, ಶಿವಪ್ರಸಾದ್, ಸುನೀಲ್ ಕುಮಾರ್ ಬಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News