ಮೇ 23ರಂದು ಸ್ತ್ರೀಶಕ್ತಿ ಗುಂಪುಗಳಿಗೆ ಬೀಜಧನ ಚೆಕ್ ವಿತರಣೆ
Update: 2022-05-22 18:26 IST
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇಲಾಖೆಗಳ ಸಹಯೋದಲ್ಲಿ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಬೀಜಧನ ಚೆಕ್ ವಿತರಣೆ ಕಾರ್ಯ ಕ್ರಮವು ಮೇ ೨೩ರಂದು ಬೆಳಗ್ಗೆ ೧೧.೩೦ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿ ರುವರು. ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.